ಶಿಕ್ಷಣ

ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Views: 337

ಕುಂದಾಪುರ: ಕೋಟೇಶ್ವರ ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಆದ್ಯಯನ ಕೇಂದ್ರದಲ್ಲಿ  75ನೇ ಗಣರಾಜ್ಯೋತ್ಸವ  ಸಂಭ್ರಮಾಚರಣೆ  ನಡೆಯಿತು.

ದ್ವಜಾರೋಹರಣವನ್ನು ನೆರವೇರಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜೇಂದ್ರ ಎಸ್. ನಾಯಕ ಅವರು“ 75 ನೇ ಗಣರಾಜ್ಯೋತ್ಸವದ ಸುವರ್ಣ ಮಹೋತ್ಸವದ ಶುಭ ಸಂದಭದಲ್ಲಿ ನಾವಿದ್ದೇವೆ. ಭಾರತ ಇಂದು ಹಿಂದೆಂದಿಗಿಂತಲೂ ಬಹಳ ವಿಶಿಷ್ಟವಾಗಿ ತನ್ನನ್ನು ಗುರುತಿಸಿಕೊಳ್ಳುತ್ತಿದ್ದು, ವಿಶ್ವಾದ್ಯಂತ ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗುತ್ತಿದ್ದು, ಇಲ್ಲಿನ ಸಂಸ್ಕೃತಿ, ಆಚಾರ-ವಿಚಾರ, ವೈವಿದ್ಯತೆ ಜೀವನ ಶೈಲಿ, ಭಾರತ ಇಂದು ಸಮಗ್ರವಾಗಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವುದು ಹಾಗು ಇನ್ನೂ ಹತ್ತು ಹಲವಾರು ಕ್ಷೇತ್ರಗಳ ವಿಶಿಷ್ಟ ಸಾದನೆ ಎನ್ನುವುದು ಇದಕ್ಕೆ ಸಾಕ್ಷಿಯಾಗಿದೆ. ಈ ವಿಶಿಷ್ಟತೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ಈ ದೇಶದ ಪ್ರಜೆಗಳಾದ ನಮ್ಮ ಆಧ್ಯ ಕರ್ತವ್ಯವಾಗಿದ್ದು, ಇದರೊಂದಿಗೆ, ಈ ನೆಲದ ಬಾಷೆ, ಸಂಸ್ಕೃತಿ, ವಿವಿಧತೆಯಲ್ಲಿ ಏಕತೆ, ಹಾಗು ಸಮಗ್ರತೆಯನ್ನು  ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ” ಎಂದರು.

ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗು ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಆಂಬೇಡ್ಕರ್ ರವರ ಭಾವಚಿತ್ರಗಳಿಗೆ ಪುಷ್ಟ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ರಾಮರಾಯ ಆಚಾರ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು, ವಾಯುಸೇನೆಯ ನಿವೃತ್ತ ಅಧಿಕಾರಿ ಹಾಗು ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್.ಎಸ್. ಹಾಗು ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಿ. ಎಸ್ ಆಶ್ವಿನಿ, ದ್ವಿತೀಯ ಎಂ.ಕಾಂ ಸ್ವಾಗತಿಸಿದರು, ವಿದ್ಯಾರ್ಥಿ ನಾಯಕ ಗೌರೀಶ ವಂದಿಸಿದರು, ಸೂರಜ್, ದ್ವಿತೀಯ ಎಂ.ಕಾಂ ಕಾರ್ಯಕ್ರಮ ನಿರೂಪಿಸಿದರು. ಸತ್ಯವ್ಯಾಸ, ಅಂತಿಮ ಬಿ ಕಾಂ ದೇಶಭಕ್ತಿ ಗೀತೆ ಹಾಡಿದರು.

Related Articles

Back to top button