ಜನಮನ
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ.ಲಿ. ಸಂಸ್ಥಾಪಕ ಬಿ ಜೈಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ

Views: 0
ಮಂಗಳೂರು: ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು. ಇದರ ಸಂಸ್ಥಾಪಕ ಬಿ. ಜೈಪಾಲ್ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ನಡೆಯಲಿದೆ.
2022 23ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ. 85 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸಂಘದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾ ಪುರಸ್ಕಾರದ ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ -ಓಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್ಸೈಟ್ https://ramakrishna credit.com ನಲ್ಲಿ ಲಭ್ಯವಿದ್ದು, ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ, ಇದರ ಸದುಪಯೋಗ ಪಡೆಯುವಂತೆ ಸಂಘದ ಅಧ್ಯಕ್ಷರಾದ ಕೆ. ಜಯರಾಜ್ ಬಿ.ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.