ಸಕ್ರಿಯ ರಾಜಕಾರಣದಿಂದ ದೂರ ಇದ್ದ ಕುಂದಾಪುರ ಮಾಜಿ ಶಾಸಕ ಹಾಲಾಡಿ ಭೇಟಿಯಾದ ಜಯಪ್ರಕಾಶ್ ಹೆಗ್ಡೆ..!

Views: 161
ಕುಂದಾಪುರ : ರಾಜಕೀಯ ಬೆಳವಣಿಗೆಯೊಂದರಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ ಹೆಗ್ಡೆ ಅವರು ಗುರುವಾರ ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಕುಂದಾಪುರದ ಶಾಸಕ ಹಾಲಾಡಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದು, ಸಂಬಂಧಿಗಳೂ ಆಗಿರುವ ಇಬ್ಬರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತಮಗೆ ಸಹಕಾರ ನೀಡುವಂತೆ ಹೆಗ್ಡೆ, ಹಾಲಾಡಿ ಅವರನ್ನು ಕೋರಿದರು ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರನ್ನು ಸೌಜನ್ಯಯುತವಾಗಿ ಭೇಟಿಯಾಗಿ ಮಾತನಾಡಿರುವುದಾಗಿ ತಿಳಿಸಿದ್ದಾರೆ. ಈ ವೇಳೆ ಹೆಬ್ರಿಯ ಕಾಂಗ್ರೆಸ್ ನಾಯಕ ಪ್ರವೀಣ್ ಬಲ್ಲಾಳ್ ಉಪಸ್ಥಿತರಿದ್ದರು.
ಜಿಲ್ಲೆಯ ಬಂಟ ಸಮಾಜದ ಇಬ್ಬರು ಘಟಾನುಘಟಿ ರಾಜಕಾರಣಿಗಳ ಭೇಟಿ ಹಾಗೂ ಮಾತುಕತೆ ನಡೆಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ.