ರಾಜಕೀಯ
ಸಚಿನ್ ಆತ್ಮಹತ್ಯೆ ಪ್ರಕರಣ:ಬಿಜೆಪಿ ಹಲವು ಮುಖಂಡರು ಪೊಲೀಸ್ ವಶಕ್ಕೆ

Views: 82
ಕನ್ನಡ ಕರಾವಳಿ ಸುದ್ದಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್ ಸಿ ರವಿ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಭಿಯಾನ ಆರಂಭಿಸಿದ್ದು, ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರೆ.
ಬೆಂಗಳೂರಿನ ವಿವಿಧೆಡೆ ಗೋಡೆಗಳ ಮೇಲೆ ಬಿಜೆಪಿ ನಾಯಕರು ಪೋಸ್ಟರ್ ಅಂಟಿಸುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಸ್ಟರ್ ಅಭಿಯಾನ ಆರಂಭಿಸಿದ್ದ ಎಂಎಲ್ ಸಿ ರವಿ ಕುಮಾರ್, ಸಿ.ಟಿ.ರವಿ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.