ರಾಜಕೀಯ

ಸಮಗ್ರ ತನಿಖೆಗೆ ಒತ್ತಾಯಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

Views: 0

ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ ನಡೆದಿದೆ.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ತಂಡದವರು ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಬನ್ನಂಜೆ ಎಸ್ಪಿ ಕಚೇರಿ ವರೆಗೆ ಮೆರವಣಿಗೆ ನಡೆಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ 800ಕ್ಕೂ ಹೆಚ್ಚು ಅಧಿಕ ಮಂದಿ ಪೊಲೀಸರನ್ನು ನೇಮಿಸಲಾಗಿತ್ತು.

ಇದೇ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರವಾಗಿ ತನಿಖೆಗೆ ಒಳಪಡಿಸುವಂತೆ ಎಬಿವಿಪಿ ಕಾರ್ಯಕರ್ತರು ಅಜ್ಜರ ಕಾರ್ಡ್ ಸೈನಿಕ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪರಸ್ಪರ ವಾಗ್ದಾನ ನಡೆದು ಉಡುಪಿ ಶಾಸಕ ಯಶಪಾಲ್ ಸುವರ್ಣ ಮಧ್ಯ ಪ್ರವೇಶಿಸಿದರು.

Related Articles

Back to top button
error: Content is protected !!