ಸಮಾಜ ಸೇವಕ ಆನಂದ.ಸಿ. ಕುಂದರ್ ಅವರಿಗೆ ಸನ್ಮಾನ

Views: 0
ಕುಂದಾಪುರ: ಕಾಲೇಜಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಕಾಲೇಜಿನ ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ, ಕಾಲೇಜಿನ ನ್ಯಾಕ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಾಲೇಜಿನ ಅಭಿವೃದ್ಧಿ ಸಮಿತಿಯ ಮತ್ತು ಗೀತಾನಂದ ಟ್ರಸ್ಟ್ ಪೌಂಡೇಶನ್ ಪ್ರವರ್ತಕರಾದ ಆನಂದ್. ಸಿ. ಕುಂದರ್ ಅವರಿಗೆ ಕೋಟ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಸನ್ಮಾನ ನೀಡಲಾಯಿತು.
ಇತ್ತೀಚೆಗೆ ಗುಂಡ್ಮಿ ಕರಾವಳಿ ಮೊಗವೀರ ಸಭಾಭವನದಲ್ಲಿ ನಡೆದ ಕಾಲೇಜಿನ ವಾರ್ಷಿಕೋತ್ಸವ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ತೆಂಕನಿಡಿಯೂರು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ, ಕಾಲೇಜಿನ ಪ್ರಾಂಶುಪಾಲೆ ಡಾ.ಸುನೀತ,ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಮೇಶ್ ಕುಂದರ್, ರಕ್ಷಕ- ಶಿಕ್ಷಕ ಸಂಘದ ಸಂಚಾಲಕ ಜನಾರ್ದನ ಆಚಾರ್ಯ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶಂಕರ್.ಬಿ. ನಾಯಕ್, ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.