ಶಿಕ್ಷಣ

ಸರಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಕಾಳಾವರ ಶಾಲೆಯ ಮುಖ್ಯ ಶಿಕ್ಷಕ ವೆಂಕಟ ನೆಲ್ಮಕ್ಕಿ ಆಯ್ಕೆ

Views: 135

ಕನ್ನಡ ಕರಾವಳಿ ಸುದ್ದಿ: ಸರಕಾರಿ ಹಿರಿಯ ಹಾಗೂ ಪದವೀಧರೇತರ ಮುಖ್ಯೋಪಾಧ್ಯಾಯರ ಸಂಘ (ರಿ.) ಬೆಂಗಳೂರು ಮತ್ತು ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ಎಸ್. ಷಡಕ್ಷರಿಯವರ ನಿರ್ದೇಶನದಂತೆ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೆಂಕಟ ನೆಲ್ಮಕ್ಕಿ ಅವರು ಆಯ್ಕೆಯಾಗಿರುತ್ತಾರೆ.

ಇವರು ಸರಕಾರಿ ಹಿರಿಯ ಮತ್ತು ಪದವೀಧರೇತರ ಮುಖ್ಯೋಪಾಧ್ಯಾಯರ ಸಂಘ, ಬೆಂಗಳೂರು (ರಿ) ಇದರ ರಾಜ್ಯ ಸಹಕಾರ್ಯದರ್ಶಿಯಾಗಿ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Articles

Back to top button