ಇತರೆ
ಸರ್ಕಾರಿ ನೌಕರನಿಗೆ ಲಂಚ ನೀಡಲು ತನ್ನ ಹೆಂಡತಿಯ ಮಾಂಗಲ್ಯ ಸರವನ್ನೇ ಅಡವಿಟ್ಟ..!

Views: 136
ಕನ್ನಡ ಕರಾವಳಿ ಸುದ್ದಿ: ಸರ್ಕಾರಿ ನೌಕರನಿಗೆ ಲಂಚ ನೀಡಲು ತನ್ನ ಹೆಂಡತಿಯ ಮಾಂಗಲ್ಯ ಸರವನ್ನು ಅಡವಿಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ.
ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಮಂಜೂರಾತಿ ಸಿಕ್ಕಿತ್ತು. ಮಹಾಂತೇಶ ಅವರು ಸಾಲ ಮಾಡಿ ಮನೆ ನಿರ್ಮಾಣ ಆರಂಭಿಸಿದ್ದರು.ಆದರೆ, ಬ್ಯಾಂಕ್ ಖಾತೆಗೆ ಯಾವುದೇ ಬಿಲ್ ಬಂದಿರಲಿಲ್ಲ. ಹೀಗಾಗಿ ಬಿಲ್‌ಗಾಗಿ ತಹಶೀಲ್ದಾರ್ ಕಚೇರಿಗೆ ಹೋಗಿದ್ದಾರೆ. ಈ ವೇಳೆ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮದನ್ ಮೋಹನ್ ಲಂಚ ನೀಡುವಂತೆ ಕೇಳಿದ್ದಾನೆ. ಹೀಗಾಗಿ ಮಹಾಂತೇಶ ಪತ್ನಿಯ ಮಾಂಗಲ್ಯ ಸರ ಅಡವಿಟ್ಟು 20 ಸಾವಿರ ನೀಡಿದ್ದಾನೆ. ಆದಾಗ್ಯೂ ಇದುವರೆಗೆ ಬಿಲ್ ಮಂಜೂರು ಆಗಿಲ್ಲ
ಹೀಗಾಗಿ ಈ ಬಗ್ಗೆ ತಹಶೀಲ್ದಾರ್ ಶರಣಮ್ಮ ಜೊತೆ ಅಳಲು ತೋಡಿಕೊಂಡಿದ್ದಾನೆ. ಸದ್ಯ ಸಂತ್ರಸ್ತನ ದೂರಿಗೆ ಸ್ಪಂದಿಸಿದ ತಹಶೀಲ್ದಾರ್ ಶರಣಮ್ಮ, ಹಣ ನೀಡಿರುವ ದಾಖಲೆಗಳನ್ನು ನನಗೆ ನೀಡಿ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿದ್ದಾರೆ.