ಇತರೆ

ಸಾರ್ವಜನಿಕ ಶೌಚಾಲಯದಲ್ಲಿದ್ದ ವೇಳೆ ಕಿಟಕಿ ಮೂಲಕ ಮಹಿಳೆಯ ಪೋಟೋ ತೆಗೆದು ಪರಾರಿ!

Views: 84

ಕನ್ನಡ ಕರಾವಳಿ ಸುದ್ದಿ:ಶೌಚಾಲಯದಲ್ಲಿ ಮಹಿಳೆಯೊಬ್ಬರು ಇದ್ದಾಗ ಹಿಂಬದಿ ಕಿಟಕಿ ಮೂಲಕ ಯಾರೋ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್‌ ಬಳಿ  ನಡೆದಿದೆ.

ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೋ ತೆಗೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಈ ಭಾಗದ ಕಿಟಕಿಯ ಗ್ಲಾಸ್ ಸರಿದಿದ್ದು, ಸರಿದ ಭಾಗದಿಂದ ಫೋಟೋವನ್ನು ಕ್ಲಿಕ್ಕಿಸಿದ್ದಾನೆ. ಈ ಸಂಧರ್ಭ ಆ ಮಹಿಳೆ ಜೋರಾಗಿ ಕಿರುಚಿಕೊಂಡ ಕಾರಣ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಮಹಿಳೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Related Articles

Back to top button