ಇತರೆ
ಸಾಲಗಾರರ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಪತಿ ಸಾವು, ಪತ್ನಿ ಗಂಭೀರ

Views: 229
ಕನ್ನಡ ಕರಾವಳಿ ಸುದ್ದಿ: ಸಾಲಗಾರರ ಕಿರುಕುಳಕ್ಕೆ ನೊಂದು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ಹೌಸಿಂಗ್ ಬೋರ್ಡ್ ಏರಿಯಾದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಅನೀಲ್ (47) ಮೃತ ವ್ಯಕ್ತಿ. ಪತ್ನಿ ಉಮಾ (45) ಸ್ಥಿತಿ ಗಂಭೀರವಾಗಿದೆ. ಉಮಾ ಅವರನ್ನು ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಣಿಗಲ್ ನಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಇಟ್ಟುಕೊಂಡಿದ್ದ ಅನಿಲ್ ಇತ್ತೀಚೆಗೆ ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿ 8-10 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ಸಾಲಗಾರರ ಕಿರುಕುಳಕ್ಕೆ ನೊಂದು ದಂಪತಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅನಿಲ್ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಪತ್ನಿ ಸ್ಥಿತಿ ಗಂಭೀರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ನೆರೆಹೊರೆಯವರು ಉಮಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.