ಸಾಲಬಾಧೆ:ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Views: 61
ಮಂಡ್ಯ:ಸಾಲಬಾಧೆ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಚಂದಗಾಲು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ(65), ರತ್ನಮ್ಮ(45) ಹಾಗೂ ಅವರ ಅಪ್ರಾಪ್ತ ವಯಸ್ಸಿನ ಮಗಳು ಆತ್ಮಹತ್ಯೆ ಮಾಡಿಕೊಂಡವರು. ಮಾಸ್ತಪ್ಪ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದರು. ಸುಮಾರು 12 ಲಕ್ಷ ರೂ.ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲು ಸಾಧ್ಯವಾಗದೆ ಮನನೊಂದಿದ್ದರು ಎಂದು ತಿಳಿದುಬಂದಿದೆ.
ಇಂದು ಮಧ್ಯಾಹ್ನ ಮಾಸ್ತಪ್ಪ ಶ್ರೀರಂಗಪಟ್ಟಣದ ಗಂಜಾಂನಿಂದ ಪತ್ನಿ ರತ್ನಮ್ಮ, ಮಗಳ ಜೊತೆಗೆ ಆಟೋದಲ್ಲಿ ಮಂಡ್ಯ ತಾಲೂಕಿನ ಚಂದಗಾಲು ಗ್ರಾಮಕ್ಕೆ ಬಂದು ಸಾವಿನ ಸಾವಿಗೆ ಶರಣಾಗಿದ್ದಾರೆ. ಇಬ್ಬರ ಮೃತದೇಹ ಯಲಿಯೂರು-ಸುಂಡಹಳ್ಳಿ ಬಳಿ ವಿಸಿ ನಾಲೆಯಲ್ಲಿ ಸಿಕ್ಕಿದ್ದು, ಇನ್ನೊಬ್ಬರ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.