ಇತರೆ

ಸಾಸ್ತಾನ: ಸ್ಕೂಟರ್‌ಗೆ ಟಿಟಿ ವಾಹನ ಡಿಕ್ಕಿ, ಸವಾರ ಸಾವು 

Views: 138

ಕನ್ನಡ ಕರಾವಳಿ ಸುದ್ದಿ:ಸಾಸ್ತಾನ ಟೋಲ್‌ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಟಿ ವಾಹನ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಸ್ಕೂಟರ್ ಸವಾರ ರವೀಂದ್ರ ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಟಿಟಿ ವಾಹನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ರವೀಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!