ರಾಜಕೀಯ
ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ; ದಿಡೀರ್ ಮಣಿಪಾಲ್ ಆಸ್ಪತ್ರೆಗೆ ದಾಖಲು

Views: 417
ಕನ್ನಡ ಕರಾವಳಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ಏಕಾಏಕಿ ಬಿಗಡಾಯಿಸಿದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌರಿಬಿದನೂರಿಗೆ ಇವತ್ತು ತೆರಳಬೇಕಿತ್ತು ಆ ಒಂದು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಮುಂದಿನ ಎಲ್ಲಾ ಕಾರ್ಯಕ್ರಮಗಳು ಮುಂದೂಡುವ ಸಾಧ್ಯತೆಗಳು ಇವೆ. ಗೌರಿಬಿದನೂರಿಗೆ ತೆರಳುವ ವೇಳೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ಮುಂದಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾ ಬೇಡವಾ ಎಂಬ ನಿರ್ಧಾರಗಳಿಗೆ ಬರಲಿದ್ದಾರೆ