ರಾಜಕೀಯ

ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ್ ಹೆಗಡೆ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ  ದೂರು

Views: 324

ಬೆಂಗಳೂರು:ಸಿಎಂ‌ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ವಿರುದ್ಧ ಶಾಸಕ ಸುರೇಶ್ ಕುಮಾರ್, ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವಥ್‌ ನಾರಾಯಣ ಹಾಗೂ ವಕ್ತಾರ ಎಸ್.ಪ್ರಕಾಶ್ ಅವರಿದ್ದ ಬಿಜೆಪಿ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂಪಾಯಿ ಆಮಿಷವೊಡ್ಡಿದೆ ಎಂಬ ಸಿದ್ದರಾಮಯ್ಯ ಹೇಳಿಕೆಯ ಹಿನ್ನೆಲೆಯಲ್ಲಿ ಈ ದೂರು ನೀಡಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ಹಿಂದಿ ಮತ್ತು ಇಂಗ್ಲಿಷ್ ಭಾಷಾಜ್ಞಾನದ ಬಗ್ಗೆ ಜಯಪ್ರಕಾಶ್ ಹೆಗಡೆ ಟೀಕೆ ಮಾಡಿರುವ ಕಾರಣಕ್ಕೆ ಮತ್ತೊಂದು ದೂರು ನೀಡಲಾಗಿದೆ. ಇಬ್ಬರೂ ನಾಯಕರ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯಿಸಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಮ್ಮ ಪಕ್ಷದ ಅಭ್ಯರ್ಥಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ಕೋಟಾ ಅವರಿಗೆ ಹಿಂದಿ, ಇಂಗ್ಲಿಷ್ ಭಾಷೆ ಬರಲ್ಲ, ಈ ಹೇಳಿಕೆಯನ್ನು ಆಯೋಗ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ.

‘ಸಿದ್ದರಾಮಯ್ಯ ಅವರು ಆಪರೇಷನ್ ಕಮಲ ನಡೀತಿದೆ ಅಂತ  ಸುಳ್ಳು ಆರೋಪ ಮಾಡಿದ್ದಾರೆ. ಅವರ ಶಾಸಕರಿಗೆ ಬಿಜೆಪಿ 50 ಕೋಟಿ ರೂ ಆಮಿಷ ಒಡ್ಡುತ್ತಿದೆ ಎಂದು ಆಧಾರರಹಿತ ಸುಳ್ಳು ಹೇಳಿದ್ದಾರೆ. ಇವರ ಹೇಳಿಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.

 

Related Articles

Back to top button