ಶಿಕ್ಷಣ

ಸಿದ್ದಾಪುರ ಜ್ಞಾನಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

Views: 43

ಕನ್ನಡ ಕರಾವಳಿ ಸುದ್ದಿ: ಜ್ಞಾನಸರಸ್ವತಿ ಪದವಿಪೂರ್ವ ಕಾಲೇಜು ಸಿದ್ದಾಪುರದಲ್ಲಿ ಕಾರ್ಗಿಲ್ ವಿಜಯದಿವಸದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಾಯುಸೇನಾ ಪಡೆಯಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕರಾದ ಶ್ರೀ ಅನಂತಕೃಷ್ಣ ಎಂ. ಎಂ. ಹಾಗೂ ಡಿ ಆರ್ ಡಿ ಓ ಸೇರಿದಂತೆ ವಿವಿಧ ರಾಷ್ಟ್ರ ರಕ್ಷಣಾ ಯೋಜನೆಗಳಲ್ಲಿ ಸೇವೆ ಸಲ್ಲಿಸಿರುವ ಶ್ರೀ ಸುರೇಶ್ ಶೆಟ್ಟಿಯವರಿಗೆ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅನಂತಕೃಷ್ಣ ಎಂ.ಎಂ ಅವರು ಭಾರತೀಯ ಸೇನೆಯ ಕಾರ್ಯವಿಧಾನಗಳು ಮತ್ತು ದೇಶಪ್ರೇಮದ ಕುರಿತಾಗಿ ಮಾತನಾಡಿದರು. ಮತ್ತೋರ್ವ ಯೋಧರಾದ ಸುರೇಶ್ ಶೆಟ್ಟಿಯವರು ಸೇನಾ ಕಾರ್ಯಾಚರಣೆಗಳಲ್ಲಿ ತಂತ್ರಜ್ಞಾನದ ಬಳಕೆಯ ಕುರಿತು ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷರಾದ ಬಿ.ಎಸ್.ಸುರೇಶ್ ಶೆಟ್ಟಿಯವರು ಮಾತನಾಡಿ ದೇಶ ಕಾಯುವ ಯೋಧರ ಮಹತ್ವವನ್ನು ಯುವ ಜನತೆ ಅರ್ಥೈಸಿಕೊಳ್ಳಬೇಕಾದ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಅಮರೇಶ್ ಹೇಗ್ಡೆ, ಉಪಪ್ರಾಂಶುಪಾಲರಾದ ಹರ್ಷ ಶೆಟ್ಟಿ ಹಾಗೂ ಸರಸ್ವತಿ ವಿದ್ಯಾಲಯದ ಮುಖ್ಯೋಪಾಧ್ಯಾಯರಾದ ಶ್ವೇತ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಹರ್ಷ ಶೆಟ್ಟಿ ವಂದಿಸಿದರು.

ಕನ್ನಡ ಉಪನ್ಯಾಸಕರಾದ ನಾಗರಾಜ್ ಗುಳ್ಳಾಡಿ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button