ಶಿಕ್ಷಣ

ಸುಜ್ಞಾನ ಎಜುಕೇಶನ್ ಟ್ರಸ್ಟ್: ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಾಗರ ಪಂಚಮಿ ಹಬ್ಬದಲ್ಲಿ ಸಂಭ್ರಮಿಸಿದ ವಿದ್ಯಾರ್ಥಿಗಳು! 

Views: 241

ಕನ್ನಡ ಕರಾವಳಿ ಸುದ್ದಿ: ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಡಾಡಿ- ಮತ್ಯಾಡಿ, ಸುಜ್ಞಾನ ಎಜುಕೇಶನ್ ಟ್ರಸ್ಟ್ ನಲ್ಲಿ ನಡೆದ ನಾಗರಪಂಚಮಿ ಹಬ್ಬದಲ್ಲಿ ವಿದ್ಯಾರ್ಥಿಗಳು ಸಂಭ್ರಮಿಸಿದರು.

ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬವೇ ನಾಗರಪಂಚಮಿ. ಇದು ಪರಿಸರದೊಂದಿಗೆ ಜೀವದ ಸಂಬಂಧ ಮತ್ತು ಸಾಂಸ್ಕೃತಿಕ ಸಾಮರಸ್ಯವನ್ನು ಎತ್ತಿ ಹಿಡಿಯುವ ಸಂಭ್ರಮದ ಹಬ್ಬವಾಗಿದೆ. ಆಧುನಿಕ ಜೀವನದತ್ತ ಮುಖಮಾಡಿರುವ ಯುವಜನತೆಗೆ ಈಗ ಹಬ್ಬಹರಿದಿನಗಳ ಆಚರಣೆ, ಅದರ ಪ್ರಾಮುಖ್ಯದ ಬಗ್ಗೆ ಸರಿಯಾದ ಅರಿವಿಲ್ಲ! ಮಕ್ಕಳು ತಮ್ಮ ದಿನದ ಬಹುಪಾಲು ಸಮಯ ಕಳೆಯುವ ಶಾಲೆಯಲ್ಲಿ ನಮ್ಮ ಹಬ್ಬ ಹರಿದಿನಗಳ ಆಚರಣೆ, ಸಂಸ್ಕೃತಿಯ ಬಗ್ಗೆ ತಿಳಿಸಿಕೊಡುವುದು ಈಗ ಅಗತ್ಯ ಹಾಗೂ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರಣ್ಯ ಸ್ಕೂಲ್ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿಯನ್ನು ಅದ್ಧೂರಿಯಾಗಿ ಆಚರಿಸಿ ಮಕ್ಕಳಿಗೆ ನಾಗರಪಂಚಮಿಯ ಮಹತ್ವದ ಅರಿವು ಮೂಡಿಸಿದರು.ಶಾಲೆಯ ವಿದ್ಯಾರ್ಥಿಗಳು ನಾಗರ ಪಂಚಮಿ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮ ಪಟ್ಟರು.

ಸಂಸ್ಥೆಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ  ಶೆಟ್ಟಿ ಹಾಗೂ ಸಂಸ್ಥೆಯ ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

Related Articles

Back to top button