ಇತರೆ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ:ಐವರು ಆರೋಪಿಗಳು ಪೊಲೀಸ್ ವಶಕ್ಕೆ?

Views: 269
ಕನ್ನಡ ಕರಾವಳಿ ಸುದ್ದಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಸುಹಾಸ್ ಶೆಟ್ಟಿ ಕೊಲೆ ಮಾಡಿದ್ದ ಆರೋಪಿಗಳು ಸ್ವಿಪ್ಟ್ ಕಾರಿನಲ್ಲಿ ಪರಾರಿಯಾಗಿದ್ದರು. ಕಾರನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ, ಹತ್ಯೆಗೆ ಬಳಸಿದ್ದ ಆಯುಧಗಳನ್ನು ಕಾರಿನಲ್ಲಿಯೇ ಬಿಸಾಡಿ ಹೋಗಿದ್ದರು. ಕೊಲೆ ಬಳಿಕ ಆರೋಪಿಗಳು ಮಂಗಳೂರಿನಲ್ಲಿಯೇ ಅವಿತು ಕುಳಿತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಆಗಾಗಲೇ ಆರೋಪಿಗಳನ್ನು ಗುರುತಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪೊಲೀಸರು ಸರ್ಕಾರಕ್ಕೆ ಮಾಹಿತಿ ನೀಡುವ ಸಾಧ್ಯತೆ ಇದೆ.






