ಇತರೆ

ಸೂಟ್‌ಕೇಸ್‌ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆ

Views: 156

ಕನ್ನಡ ಕರಾವಳಿ ಸುದ್ದಿ ಹೊಸೂರು ಮುಖ್ಯರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು ಹತ್ತು ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ. ಚಲಿಸುವ ರೈಲಿನಿಂದ ಸೂಟ್‌ಕೇಸ್ ಎಸೆದಿರುವ ಶಂಕೆ ವ್ಯಕ್ತವಾಗಿದ್ದು. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಲಕಿಯ ರುಂಡ ಮತ್ತು ಮುಂಡ ಬೇರ್ಪಡಿಸಿರುವ ರೀತಿಯಲ್ಲಿ ಮುಚ್ಚಿದ ನೀಲಿ ಸೂಟ್ ಕೇಸ್‌ವೊಂದರಲ್ಲಿ ಪತ್ತೆಯಾದ ಆತಂಕಕಾರಿ ಘಟನೆ ಹಳೆ ಚಂದಾಪುರ ರೈಲ್ವೆ ಹಳಿ ಬಳಿ ನಡೆದಿದೆ.

ಬಾಲಕಿಯ ಚಹರೆ ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನೆ ಮಾಹಿತಿ ತಿಳಿದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಹಾಗೂ ಬಯ್ಯಪ್ಪನಹಳ್ಳಿ ರೈಲ್ವೆ ಸ್ಟೇಷನ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಇನ್ನೂ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Related Articles

Back to top button