ಸೈಕಲ್ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್ ಶಾಕ್; ಒಬ್ಬ ಸ್ಥಳದಲ್ಲಿಯೇ ಸಾವು

Views: 132
ಆಂಧ್ರಪ್ರದೇಶದ ಕಡಪದಲ್ಲಿ ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವೇಳೆ ಇಬ್ಬರು ಪುಟ್ಟ ವಿದ್ಯಾರ್ಥಿಗಳು ವಿದ್ಯುತ್ ತಂತಿ ಸ್ಪರ್ಶಿಸಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ.
ಅಂಗಡಿ ಬೀದಿಯಲ್ಲಿ ಜನರ ಕಣ್ಣ ಮುಂದೆಯೇ ಈ ಘೋರ ದುರಂತ ನಡೆದಿದೆ. ಈ ಘಟನೆಗೆ ಸಂಬಂಧಪಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ವಿದ್ಯಾರ್ಥಿಗಳಿಬ್ಬರು ವಿದ್ಯಾಸಾಗರ್ ಶಾಲೆಯಲ್ಲಿ 10 ಮತ್ತು 8ನೇ ತರಗತಿಯಲ್ಲಿ ಓದುತ್ತಿದ್ದು, ಬೆಳಗ್ಗೆ ಒಂದೇ ಸೈಕಲ್‍ನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಸೈಕಲ್‍ನಲ್ಲಿ ಬರುತ್ತಿರುವಾಗ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದು, ತಕ್ಷಣವೇ ಸೈಕಲ್‍ನಿಂದ ಕೆಳಗೆ ಬಿದ್ದಿದ್ದಾರೆ.ಒಬ್ಬ ವಿದ್ಯಾರ್ಥಿಯ ದೇಹಕ್ಕೆ ಮತ್ತು ಸೈಕಲ್ ಗೆ ಬೆಂಕಿ ಹೊತ್ತಿಕೊಂಡಿತು ಮತ್ತು ಇನ್ನೊಬ್ಬ ಹುಡುಗ ಅವನ ಪಕ್ಕದಲ್ಲಿ ಬಿದ್ದಿದ್ದಾನೆ.
ವಿದ್ಯಾರ್ಥಿ ತನ್ವೀರ್ ತೀವ್ರ ಸುಟ್ಟಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವನನ್ನು ಸ್ಥಳೀಯರು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.