ಸೈಬರ್ ವಂಚನೆಯ ಮತ್ತೊಂದು ಮುಖ ‘ಪಿಂಕ್ ವಾಟ್ಸ್ಆ್ಯಪ್’ ಇನ್ಸ್ಟಾಲ್ ಮಾಡಬೇಡಿ.. ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಪೊಲೀಸರು!

Views: 163
ಬೆಂಗಳೂರು, ಅಪ್ಪಿತಪ್ಪಿಯೂ ಪಿಂಕ್ ವಾಟ್ಸ್ಅಪ್ ಡೌನ್‌ಲೋಡ್ ಮಾಡಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ.! ಇದೀಗ ಪಿಂಕ್ ವ್ಯಾಟ್ಸಪ್ ಬಂದಿದ್ದು, ಇದನ್ನು ಬಳಕೆ ಮಾಡುವವರು ಅಪಾಯಕ್ಕೆ ಸಿಲುಕುತ್ತಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ. ಹಾಗಾದರೆ ಈ ಬಗ್ಗೆ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆ ಹೇಳಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್ಅಪ್ ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು, ಇಲ್ಲವೇ Android ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ ಜಾಗೃತೆಯಿಂದಿರಿ ಎಂದು ಕರ್ನಾಟಕ ರಾಜ್ಯದ ಪೊಲೀಸರು ತಿಳಿಸಿದ್ದಾರೆ.
ಸೈಬರ್ ವಂಚನೆಯ ಮತ್ತೊಂದು ಮುಖವನ್ನು ಕರ್ನಾಟಕ ಪೊಲೀಸರು ಪತ್ತೆಹಚ್ಚಿದ್ದು, ಯಾವುದೇ ಕಾರಣಕ್ಕೂ ಗುಲಾಬಿ ಬಣ್ಣದ ವಾಟ್ಸ್ಆ್ಯಪ್ ಅಥವಾ ಪಿಂಕ್ ವಾಟ್ಸ್ಆ್ಯಪ್ ಅನ್ನು ಇನ್ಸ್ಟಾಲ್ ಮಾಡಬೇಡಿ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್‌ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಿರುವ ಕರ್ನಾಟಕ ರಾಜ್ಯ ಪೊಲೀಸ್, ಗುಲಾಬಿ ಬಣ್ಣದ ವಾಟ್ಸ್ಆ್ಯಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್ಆ್ಯಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ ಆ್ಯಂಡ್ರಾಯ್ಡ್ ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ ಎಂದು ತಿಳಿಸಿದೆ.
ನೀವು ಅಪ್ಪಿತಪ್ಪಿಯೂ ವಾಟ್ಸ್ಆ್ಯಪ್ ಪಿಂಕ್ ಇನ್ಸ್ಟಾಲ್ ಮಾಡಿದರೆ ಸೈಬರ್ ವಂಚಕರು ನಿಮ್ಮ ಫೋಟೊ, ಕಾಂಟ್ಯಕ್ಟ್, ನೆಟ್ ಬ್ಯಾಂಕಿಂಗ್ ಪಾಸ್‌ವರ್ಡ್‌ಗಳು, ಪ್ರಮುಖ ಸಂದೇಶಗಳನ್ನು ಹ್ಯಾಕ್ ಮಾಡುವ ಸಾಧ್ಯೆತೆ ಹೆಚ್ಚಿರುತ್ತದೆ ಎಂದು ಕರ್ನಾಟಕ ಪೊಲೀಸ್ ಎಚ್ಚರಿಕೆ ಸಂದೇಶ ರವಾನಿಸಿದೆ.
ವಂಚಕರು ನಿಮ್ಮ ಮೊಬೈಲ್‌ನ ಸಂಪೂರ್ಣ ಡೇಟಾವನ್ನು ಕದಿಯುವ ಸಾಧ್ಯತೆಯಿದೆ. ಆದ್ದರಿಂದ ಯಾರೂ ಕೂಡ ವಾಟ್ಸ್ಆ್ಯಪ್ ಪಿಂಕ್ ಬಳಸಬೇಡಿ. ಒಂದು ವೇಳೆ ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾದರೆ 1930 ಗೆ ಕರೆ ಮಾಡಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ.
ಇನ್ನು ವಾಟ್ಸ್ಆ್ಯಪ್ ಪಿಂಕ್ ವಾಟ್ಸ್ಆ್ಯಪ್ನ ಹೊಸ ಆವೃತ್ತಿ ಅಥವಾ ವಾಟ್ಸ್ಆ್ಯಪ್ ಅಧಿಕೃತ ಬಿಡುಗಡೆ ಅಲ್ಲ. ಬದಲಿಗೆ, ಇದು ಬಳಕೆದಾರರನ್ನು ವಂಚಿಸುವ, ಮೋಸಗೊಳಿಸುವ ದೊಡ್ಡ ಹಗರಣ ಆಗಿದೆ. ಇದರ ಲಿಂಕ್ ಇರುವ ಸಂದೇಶಗಳನ್ನು ಸಾಮಾನ್ಯವಾಗಿ ಸ್ಪ್ಯಾಮ್ ಸಂದೇಶಗಳ ಮೂಲಕ ಹರಡಲಾಗುತ್ತದೆ. ಜೊತೆಗೆ ಲಿಂಕ್ ಲಗತ್ತಿಸಿ ಅದನ್ನು ಕ್ಲಿಕ್ ಮಾಡುವಂತೆ ಸೂಚಿಸಿರಲಾಗುತ್ತದೆ.
ಲಿಂಕ್ ಕ್ಲಿಕ್ ಮಾಡಿದರೆ ಬಳಕೆದಾರರನ್ನು ವೆಬ್‌ಸೈಟ್‌ಗೆ ಕರೆದೊಯ್ಯಲಾಗುತ್ತದೆ. ಅಲ್ಲಿ ಅವರು ವಾಟ್ಸ್ಆ್ಯಪ್ ಪಿಂಕ್ ಅನ್ನು ಡೌನ್‌ಲೋಡ್ ಮಾಡಲು ಸೂಚಿಸಲಾಗುತ್ತದೆ. ಆದರೂ ಹೊಸ ವೈಶಿಷ್ಟ್ಯಗಳು ಅಥವಾ ಥೀಮ್‌ಗಳನ್ನು ಸ್ವೀಕರಿಸುವ ಬದಲು, ಬಳಕೆದಾರರ ಮೊಬೈಲ್‌ಗಳಲ್ಲಿ ಅವರ ಗಮನಕ್ಕೆ ಬಾರದಂತೆ ದುರುದ್ದೇಶಪೂರಿತ ಸಾಫ್ಟ್‌ವೇರ್ ಡೌನ್‌ಲೋಡ್ ಆಗುತ್ತದೆ. ಈ ಸಾಫ್ಟ್‌ವೇರ್ ಮೂಲಕ ದತ್ತಾಂಶಗಳನ್ನು ಕದಿರುವ ಸಾಧ್ಯೆತೆ ಹೆಚ್ಚಿರುತ್ತದೆ. ಆದ್ದರಿಂದ ಎಚ್ಚರಿಕೆಯಿಂದಿರುವುದು ಸೂಕ್ತ ಎಂದು ತಿಳಿಸಿದೆ.