ಇತರೆ

ಸೌಜನ್ಯ ಅತ್ಯಾಚಾರ ಪ್ರಕರಣ:ಮೂರು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ ತೀರ್ಪು 

Views: 291

ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್‌ನ ವಿಭಾಗೀಯ ಪೀಠ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ನ್ಯಾಯಪೀಠ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಿದೆ.

ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು ಸಂತೋಷ್ ರಾವ್‌ನನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸೌಜನ್ಯ ತಂದೆ ಚಂದಪ್ಪ ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅದೇ ರೀತಿ ಪ್ರಕರಣದಲ್ಲಿ ನಿರಪರಾಧಿಯೆಂದು ಹೊರ ಬಂದ ಸಂತೋಷ್ ರಾವ್ ತನಗೆ ಪರಿಹಾರ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

Related Articles

Back to top button