ಇತರೆ

ಸೌಜನ್ಯ ಕೊಲೆ ಪ್ರಕರಣ; ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ

Views: 279

ಕನ್ನಡ ಕರಾವಳಿ ಸುದ್ದಿ:ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೇ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ ಹಿನ್ನೆಲೆಯಲ್ಲಿ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಕೋಟಿ ರೂ. ಮಾನನಷ್ಟ ಮೊಕದ್ದಮ ಹೂಡಿದ್ದಾರೆ.

ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಅವರು ಆದೇಶ ನೀಡಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂ.ಡಿ. ಮೇಲೆ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಎರಡು ತಿಂಗಳ ಹಿಂದೆ ಯೂಟ್ಯೂಬರ್‌ ಸಮೀರ್‌ ಎಂಡಿ, ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಕೇಸ್‌ನ ಬಗ್ಗೆ ವಿಡಿಯೊ ಮಾಡಿ ಯೂಟ್ಯೂಬ್‌ನಲ್ಲಿ ಹಾಕಿದ್ದರು. ಈ ವಿಡಿಯೊಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ವಿಡಿಯೊವನ್ನು ಒಂದು ಕೋಟಿಗೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದರು. ಸಾಕಷ್ಟು ಪರ ವಿರೋಧವು ವಿಡಿಯೊಗೆ ವ್ಯಕ್ತವಾಗಿತ್ತು. ನಂತರ ಯೂಟ್ಯೂಬರ್‌ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಜತೆಗೆ ಹಲವರು ಕರೆ ಮಾಡಿ ಬೆದರಿಕೆಯನ್ನು ಹಾಕಿದ್ದರು.

 

Related Articles

Back to top button