ಸೌಜನ್ಯ ಕೊಲೆ ಪ್ರಕರಣ; ಸಂತೋಷ್ ರಾವ್ಗೆ ಹೈಕೋರ್ಟ್ ನೋಟಿಸ್

Views: 186
ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತೋಷ್ ರಾವ್ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಸಂತೋಷ್ ರಾವ್ ವಿರುದ್ಧ ಕೊಲೆ ಆರೋಪ ಕೇಳಿಬಂದಿತ್ತು. ಆದರೆ, ಸಿಬಿಐ ವಿಶೇಷ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ.
ಕಳೆದ ವರ್ಷ ಜೂನ್ 16ರಂದು ಮಕ್ಕಳ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಸಂತೋಷ್ ರಾವ್ನನ್ನ ಖುಲಾಸೆ ಮಾಡಿತ್ತು. ಕೋರ್ಟ್ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಅದಲ್ಲದೇ ಕೇಸ್ ಮರು ತನಿಖೆ ಮಾಡುವಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಅರ್ಜಿಗೆ ಪ್ರತಿಕ್ರಿಯಿಸಿದ ನ್ಯಾಯಪೀಠ ಸರ್ಕಾರ ಮೂಲ ದೂರುದಾರರಿಗೆ ಲಿಬರ್ಟಿ ನೀಡಿ, ಜೊತೆಗೆ ಸಂತ್ರಸ್ತ ಕುಟುಂಬಕ್ಕೂ ಅವಕಾಶ ನೀಡಿತ್ತು. ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿತ್ತು.
ಹೀಗಾಗಿ, ಸಿಬಿಐ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ನೇತೃತ್ವದ ದ್ವಿಸದಸ್ಯ ಪೀಠ, ಆರೋಪಿ ಸಂತೋಷ್ ರಾವ್ಗೆ ನೋಟಿಸ್ ಜಾರಿ ಮಾಡಿದೆ.
2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಘಟನೆ ನಡೆದಿತ್ತು. 2013ರ ನವೆಂಬರ್ 6ರಂದು ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು. ಪ್ರಕರಣದ ವಿಚಾರಣೆಯ ನಂತರ ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಇದರಿಂದ ವಿವಿಧ ಸಂಘಟನೆಗಳು ರಾಜಕೀಯ ಪಕ್ಷಗಳು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು. ಮರು ತನಿಖೆಗೆ ಆದೇಶಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು.