ಇತರೆ

ಸೌದಿ ರಾಷ್ಟ್ರಕ್ಕೆ ಪರಾರಿಗೆ ಯತ್ನಿಸಿದ ಶಂಕಿತ ಉಗ್ರ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸೆರೆ

Views: 85

ಬೆಂಗಳೂರು:ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಗೆ ಸೇರಿದ ಈತ ನಿನ್ನೆ ಬೆಳಿಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿದ್ದು, ಇಲ್ಲಿಂದ ಸೌದಿಗೆ ಪರಾರಿಯಾಗಲು ಯತ್ನಿಸಿದ್ದಾನೆ.

ಈ ಮಾಹಿತಿ ಅರಿತ ಇಮಿಗ್ರೇಷನ್ ಅಧಿಕಾರಿಗಳು ತಕ್ಷಣ ಎನ್ಐಎಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕಾಗಮಿಸಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ

ಈತ ಉಗ್ರಗಾಮಿ ಹಾಗೂ ಇಸ್ಲಾಂ ಮೂಲಭೂತ ಸಿದ್ಧಾಂತದಿಂದ ಪ್ರಭಾವಿತನಾಗಿ ಜಗತ್ತಿನ ಇಸ್ಲಾಮೀಕರಣ ಮತ್ತು ಇಸ್ಲಾಮಿಕ್ ಕಾನೂನು ಸ್ಥಾಪಿಸುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದ ಎಂಬುದು ಎನ್ಐಎ ತನಿಖೆಯಿಂದ ಗೊತ್ತಾಗಿದೆ.ಎನ್ಐಎ ಈ ಬಗ್ಗೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಈತನ ಪಾತ್ರವಿರುವುದು ಕಂಡುಬಂದಿದೆ.

Related Articles

Back to top button