ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು ಗುರುತಿಸಲಾಗಿದೆ.
ಮೃತ ವಿದ್ಯಾರ್ಥಿನಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಮದ್ಯಾಹ್ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪ್ರಕರಣ ದಾಖಲಾಗಿದೆ.