ಸಾಂಸ್ಕೃತಿಕ
ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿಗೆ ಗಾಯಕ ಡಾ.ಗಣೇಶ್ ಗಂಗೊಳ್ಳಿ ಆಯ್ಕೆ

Views: 50
ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಕೊಡಮಾಡುವ 2024-2025 ರ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಪ್ರಸಿದ್ಧ ಗಾಯಕ ಹಾಗೂ ಸಂಘಟಕರಾದ ಡಾ.ಗಣೇಶ್ ಗಂಗೊಳ್ಳಿ ಆಯ್ಕೆ ಮಾಡಲಾಗಿದೆ.
ಫೆ.5ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಇಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ರಾಜ್ಯ ಯುವ ಸಂಘಗಳ ರಾಜ್ಯಾಧ್ಯಕ್ಷರಾದ ಡಾ. ಎಸ್ ಬಾಲಾಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.