ಇತರೆ

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ: ಆತ್ಮಹತ್ಯೆಯೋ.. ಕೊಲೆಯೋ..!

Views: 79

ಕಲಬುರಗಿ: ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ

ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ

ಘಟನೆ ಸಂಬಂಧ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುವುದು ತನಿಖೆ ನಂತರ ತಿಳಿದು ಬರಲಿದೆ.

Related Articles

Back to top button