ರಾಜಕೀಯ

ಹಿಂದಿನ  ಸರ್ಕಾರದಲ್ಲಿ ನಡೆದ ಅವ್ಯವಹಾರ, ಭ್ರಷ್ಟಾಚಾರ ಪ್ರಕರಣ ತನಿಖೆ; ಸಿದ್ದರಾಮಯ್ಯ

Views: 0

ಹಿಂದಿನ ಸರ್ಕಾರದಲ್ಲಿ ನಡೆದ ಅವ್ಯವಹಾರಗಳು, ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಾಸನದಲ್ಲಿ ನಡೆದ ಕೆಂಪೇಗೌಡ ಜಯಂತಿ ನಂತರ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ತನಿಖೆಯನ್ನು ಕೈಗೊಳ್ಳಲಾಗುವುದು.ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಹಿಂದಿನ ಸರ್ಕಾರಗಳ ಹಗರಣಗಳಾದ ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ ,40% ಕಮಿಷನ್, ಕೊರನಾ ಸಂದರ್ಭದಲ್ಲಿ ವೈದ್ಯಕೀಯ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ನಾವು ಕೊಟ್ಟ ಮಾತಿನಂತೆ ಒಂದು ಗ್ಯಾರಂಟಿಯನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಜೂನ್ ಒಂದರಿಂದ ಗ್ರಹ ಜ್ಯೋತಿಯನ್ನು ಜಾರಿಗೆ ತರುತ್ತೇವೆ, ಗ್ರಹಲಕ್ಷ್ಮಿ ಯೋಜನೆಯನ್ನು ಅಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು ಅರ್ಜಿಗಳು ಸ್ವೀಕಾರವಾಗುತ್ತಿದೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಲ್ಲಿಯೂ ಅಗತ್ಯವಿರುವಷ್ಟು ಅಕ್ಕಿ ದೊರೆಯುತ್ತಿಲ್ಲ ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನ ಭಾಗ್ಯ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Related Articles

Back to top button