ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ

Views: 271
ಕನ್ನಡ ಕರಾವಳಿ ಸುದ್ದಿ: ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನರಾದರು.ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.
800ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ ಅವರು 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ವಿಜಯಾ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅವರಿಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಬಂದಿತು.ಅವರು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು. 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. 2016ರಿಂದ ಈಚೆಗೆ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಕಾಣಿಸಿಕೊಂಡಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು.