ರಾಜಕೀಯ

ಹಿರಿಯ ನಾಯಕರ ಕಡೆಗಣನೆ, ಕುಟುಂಬ ರಾಜಕಾರಣ ಸಹಿಸಲ್ಲ:ಯತ್ನಾಳ್ ಗುಡುಗು

Views: 51

ನವದೆಹಲಿ,:ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಬಣ ಕಿತ್ತಾಟ ಹೈಕಮಾಂಡ್ ಅಂಗಳ ತಲುಪಿರುವ ಬೆನ್ನಲ್ಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮತ್ತೆ ಗುಡುಗಿದ್ದಾರೆ. ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.

ಪಕ್ಷದ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ಶಿಸ್ತು ಸಮಿತಿ ವಿವರಣೆ ಕೇಳಿ ಶೋಕಾಸ್ ನೀಡಿತ್ತು. ಈ ನೋಟಿಸ್‌ಗೆ 10 ದಿನಗಳ ಒಳಗಾಗಿ ಉತ್ತರ ನೀಡುವಂತೆಯೂ ಗಡುವು ನೀಡಲಾಗಿತ್ತು.

ಆದರೆ,ದೆಹಲಿಯಲ್ಲಿ ಬೀಡು ಬಿಟ್ಟಿರುವ ಯತ್ನಾಳ್ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಪಕ್ಷದಲ್ಲಿ ನಡೆಯುತ್ತಿರುವ ಕುಟುಂಬ ರಾಜಕಾರಣ, ಹಿರಿಯ ನಾಯಕರ ಕಡೆಗಣನೆ ಸೇರಿದಂತೆ ಇನ್ನಿತರ ಆಂತರಿಕ ವಿಚಾರಗಳ ಬಗ್ಗೆ ವರಿಷ್ಠರಿಗೆ ಪತ್ರದ ಮೂಲಕ ಬರೆದು ನೋಟಿಸ್‌ಗೆ ಉತ್ತರ ನೀಡಿದ್ದೇನೆ ಎಂದರು.

ಪಕ್ಷದ ಹಿತದೃಷ್ಟಿಯಿಂದ ಎಲ್ಲ ಸಂಸದರು ಹೇಳಿಕೆ ನೀಡಿದ್ದಾರೆ. ಆದರೆ, ಹೊಂದಾಣಿಕೆಯ ರಾಜಕೀಯದ ಮೂಲಕ ಕೆಲವರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಈ ಬಗ್ಗೆ ಹೋರಾಟ ಮುಂದುವರೆಯಲಿದೆ ಎಂದು ಅವರು ಹೇಳಿದರು.

ರಾಜನಾಥ್‌ಸಿಂಗ್ ಭೇಟಿ

ದೆಹಲಿಯಲ್ಲಿ ಬೀಡು ಬಿಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರ ಮಾಜಿ ರಾಜಕೀಯ ಕಾರ್ಯದರ್ಶಿಎನ್.ಆರ್ ಸಂತೋಷ್, ಹರಿಹರ ಕ್ಷೇತ್ರದ ಶಾಸಕ ಬಿ.ಪಿ ಹರೀಶ್, ಮಾಜಿ ಸಂಸದ ಬಿ.ವಿ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

 

Related Articles

Back to top button