ಕರಾವಳಿ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ

Views: 78

ಮಂಗಳೂರು: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮಾ.1 ರಂದು ಬೆಳಿಗ್ಗೆ  ನಿಧನರಾದರು.ಅವರಿಗೆ (65) ವರ್ಷ ವಯಸ್ಸಾಗಿತ್ತು

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಆರಂಭಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಸೃಜನಶೀಲ ಬರಹಗಾರರಾಗಿ, ಅನೇಕ ಕಥೆ, ಕವನಗಳನ್ನು ಬರೆದಿದ್ದು, ಬೊಗಾಣೆ (ಕೊಂಕಣಿ), ಸೀತಾನದಿ (ಕನ್ನಡ), ದಬಕ್‌ ದಬಕ್‌ ಐಸಾ (ತುಳು), ಐಸ್‌ಕ್ರೀಂ (ತುಳು) ಮುಂತಾದ ಚಿತ್ರಗಳಲ್ಲಿ ನಟಿಸುವ ಮೂಲಕ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಕರ್ನಾಟಕ ಕರಾವಳಿ ಇತಿಹಾಸದ ಕುರಿತು 608 ಸಂಶೋಧನ ಲೇಖನಗಳನ್ನು ಬರೆದು ಉದಯವಾಣಿಯ ಮೂಲಕ ಪ್ರಕಟಿಸಿದ್ದಾರೆ.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಗಮನಾರ್ಹ ಸಾಧನೆ ಗುರುತಿಸಿ ದುಬೈಯಲ್ಲಿ ‘ಪತ್ರಿಕಾ ರಂಗದ ಭೀಷ್ಮ’ ಅಂತರಾಷ್ಟ್ರೀಯ ಪ್ರಶಸ್ತಿ. ‘ಕರಾವಳಿ ಪೌರ ಪ್ರಶಸ್ತಿ ‘ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’, ‘ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ,’ ಸಂದೇಶ ಪ್ರತಿಷ್ಠಾನದ ರಾಜ್ಯ ಪ್ರಶಸ್ತಿ, ಕೆನರಾ ಬ್ಯಾಂಕ್‌ ಅಮೃತೋತ್ಸವ ಪುರಸ್ಕಾರ ಮೊದಲಾದ ಹಲವು ಗೌರವಗಳಿಗೆ ಭಾಜನರಾಗಿದ್ದಾರೆ.

 

 

Related Articles

Back to top button