ಕರಾವಳಿ

ಹಿರಿಯ ಹಿರಿಯ ಸಮಾಜ ಸೇವಕ ಕಾಸಿಂ ಬಾರಕೂರು ನಿಧನ

Views: 33

ಉಡುಪಿ: ಜಮೀಯತುಲ್ ಫಲಾಹ್ ದ.ಕ. ಹಾಗೂ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ಸಂಘಟಕ ಕಾಸಿಂ ಬಾರಕೂರು(70) ಅಲ್ಪಕಾಲದ ಅಸೌಖ್ಯದಿಂದ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಫೆ.15ರಂದು ಅಪರಾಹ್ನ ನಿಧನರಾದರು.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ, ಜಮೀಯ್ಯತುಲ್ ಫಲಾಹ್ ಉಡುಪಿ ಘಟಕದ ಅಧ್ಯಕ್ಷರಾಗಿ, ಬಾರಕೂರು ಮಲಿಕ್ ದೀನಾರ್ ಜುಮಾ ಮಸೀದಿಯ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಕಾರ್ಯದರ್ಶಿಯಾಗಿ ಹಾಗೂ ಹಲವು ಸಂಘಟನೆಯಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು. ಇವರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Related Articles

Back to top button