ಆರೋಗ್ಯ

ಹುಬ್ಬಳ್ಳಿ:ಕಬ್ಬಿನ ಗದ್ದೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ ಪರಾರಿ !

Views: 0

ಹುಬ್ಬಳ್ಳಿ: ಇರುವೆಗಳ ಕಾಟಕ್ಕೆ ಮಗು ಆಕ್ರಂದನ, ಆಚೆ ಬಂದು ಏಳು ಆರಂಭಿಸಿದಾಗ ಮಗು ಅಳಲು ಆರಂಭಿಸಿತ್ತು. ಆಗ ಶಿಶುವಿನ ಧ್ವನಿ ಕೇಳಿಸಿಕೊಂಡ ಕಬ್ಬಿನ ಗದ್ದೆಯ ಪಕ್ಕದ ಮನೆಯವರು ಶಿಶು ರಕ್ಷಿಸಿ ಆರೈಕೆ ಮಾಡಿದ್ದಾರೆ. ನಂತರ ಮಗುವಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಜಿಲ್ಲಾ ಶಿಶುಪಾಲನಾ ಕೇಂದ್ರಕ್ಕೆ ಶಿಶುವನ್ನು ರವಾನಿಸಲಾಗಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಬ್ಬಿನ ಗದ್ದೆಯಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಹೊರ ವಲಯದ ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಗದ್ದೆಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಕಬ್ಬಿನ ಗದ್ದೆಯಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿ ತಾಯಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಶಿಶು ಅಳುತ್ತಿದ್ದ ಸದ್ದು ಕೇಳಿದ ಗದ್ದೆಯ ಪಕ್ಕದ ಮನೆಯವರು ಶಿಶುವನ್ನು ರಕ್ಷಿಸಿ ಆರೈಕೆ ಮಾಡಿದ್ದಾರೆ. ಗದ್ದೆಯಲ್ಲಿ ಸಿಕ್ಕ ಗಂಡು ಮಗು ಅಂದಾಜು ಮೂರು ಕೆಜಿ ತೂಕವಿದೆ.

ಶಿಶುವಿಗೆ ಇರುವೆಗಳು ಕಚ್ಚಲು ಆರಂಭಿಸಿದಾಗ ಮಗು ಅಳಲು ಆರಂಭಿಸಿತ್ತು. ಆಗ ಶಿಶುವಿನ ಧ್ವನಿ ಕೇಳಿಸಿಕೊಂಡ ಕಬ್ಬಿನ ಗದ್ದೆಯ ಪಕ್ಕದ ಮನೆಯವರು ಶಿಶು ರಕ್ಷಿಸಿ ಆರೈಕೆ ಮಾಡಿದ್ದಾರೆ. ನಂತರ ಮಗುವಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಜಿಲ್ಲಾ ಶಿಶುಪಾಲನಾ ಕೇಂದ್ರಕ್ಕೆ ಶಿಶುವನ್ನು ರವಾನಿಸಲಾಗಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button