ಇತರೆ

ಹುಲಿ ದಾಳಿಗೆ ನವವಿವಾಹಿತ ಸಾವು 

Views: 104

ಕನ್ನಡ ಕರಾವಳಿ ಸುದ್ದಿ: ಮೈಸೂರು ಜಿಲ್ಲೆಯ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ 5ನೇ ಬ್ಲಾಕ್ ನಿವಾಸಿ ಹರೀಶ್ (29) ಕುರಿ ಮೇಯಿಸುತ್ತಿದ್ದಾಗ ಸೋಮವಾರ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಮೂರು ತಿಂಗಳ ಹಿಂದಷ್ಟೆ ಅವರ ಮದುವೆಯಾಗಿತ್ತು.

ಕುರಿ ಹಿಂಡಿನೊಂದಿಗೆ ಅರಣ್ಯ ಪ್ರದೇಶಕ್ಕೆ ತೆರಳಿದ್ದಾಗ ಪೊದೆಯಲ್ಲಿ ಅಡಗಿದ್ದ ಹುಲಿ ದಾಳಿ ನಡೆಸಿತ್ತು. ಕುತ್ತಿಗೆ ಭಾಗಕ್ಕೆ ತೀವ್ರ ಗಾಯವಾಗಿ ರಕ್ತಸ್ರಾವವಾಗಿದ್ದ ಅವರನ್ನು ಸ್ಥಳೀಯರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು.

ಸ್ಥಳಕ್ಕೆ ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿ ಮೊಹಮ್ಮದ್ ಫೈಜಲ್ ಮತ್ತು ವಲಯ ಅರಣ್ಯಾಧಿಕಾರಿ ನಂದಕುಮಾರ್ ಭೇಟಿ ನೀಡಿದ್ದರು. ಇಲಾಖೆಯಿಂದ ಪರಿಹಾರ ನೀಡುವ ಭರವಸೆ ನೀಡಿದರು.

Related Articles

Back to top button