ಇತರೆ
ಹೆಂಗವಳ್ಳಿ: ಬಾವಿಗೆ ಬಿದ್ದ ಚಿರತೆ ರಕ್ಷಣೆ

Views: 188
ಕನ್ನಡ ಕರಾವಳಿ ಸುದ್ದಿ: ಹೆಂಗವಳ್ಳಿ ಗ್ರಾಮದ ಭಜನೆ ಕೊರಗ ಕುಲಾಲ ಎಂಬುವವರ 30 ಅಡಿ ಬಾವಿಗೆ ಬಿದ್ದ ಚಿರತೆಯನ್ನು ಶುಕ್ರವಾರ ರಕ್ಷಿಸಲಾಗಿದೆ.
ಈ ಪ್ರದೇಶದಲ್ಲಿ ಹಲವಾರು ನಾಯಿಗಳನ್ನು ಹೊತ್ತೊಯ್ದು ಚಿರತೆ ಗುರುವಾರ ರಾತ್ರಿ ಹೊತ್ತಿನಲ್ಲಿ ಯಾವುದೋ ಪ್ರಾಣಿಯನ್ನು ಅಟ್ಟಿಸಿಕೊಂಡು ಆಯತಪ್ಪಿ ಆವರಣಕ್ಕೆ ಬಲೆ ಕಟ್ಟಿದ ಬಾವಿಗೆ ಬಿದ್ದಿದೆ.
ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಹಿಡಿದು ಅಭಯಾರಣ್ಯಕ್ಕೆ ಬಿಡಲಾಗಿದೆ ಎಂದು ತಿಳಿದುಬಂದಿದೆ.