ಇತರೆ
ಹೆಂಗವಳ್ಳಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೃಷಿಕ ಚಿಕಿತ್ಸೆಗೆ ಫಲಿಸದೆ ಸಾವು

Views: 137
ಕುಂದಾಪುರ :ಹೆಂಗವಳ್ಳಿ ಗ್ರಾಮದ ಕೃಷಿಕ ಮರೂರು ಕೃಷ್ಣ (58)ಇತ್ತೀಚಿಗೆ ಮನೆಯ ತೋಟದಲ್ಲಿರುವ ಮಾವಿನ ಮರದಲ್ಲಿ ಮಾವಿನ ಕಾಯಿ ಕೊಯ್ಯುವಾಗ ಮರದಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಚಿಕಿತ್ಸೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಫಲಿಸದೆ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ರೈತ ಕೃಷ್ಣ ಅವರನ್ನು ಕೂಡಲೇ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಸಹೋದರಿ ಪಾರ್ವತಿ ಅವರು ನೀಡಿದ ದೂರಿನಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.