ಹೆಂಡತಿ ಟಾರ್ಚರ್‌ನಿಂದ ನಾನು ಸಾಯುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ!

Views: 163
ಕನ್ನಡ ಕರಾವಳಿ ಸುದ್ದಿ: ಪತ್ನಿ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.
ಪೀಟರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೆಲ ದಿನಗಳಿಂದ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಇದರಿಂದ ಮನನೊಂದು ಪತಿ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ.
ಕೆಲ ದಿನಗಳಿಂದ ಪತಿ ಪೀಟರ್, ಪತ್ನಿ ಪಿಂಕಿ ನಡುವೆ ಜಗಳವಾಗುತ್ತಿತ್ತು. ಇದರಿಂದ ಬೇಸತ್ತು ಪೀಟರ್ ಪ್ರಾಣ ಕಳೆದುಕೊಂಡಿದ್ದಾರೆ. ವಿಚ್ಛೇದನ ಅರ್ಜಿ ವಿಚಾರಣೆ ಇಂದು ಕೋರ್ಟ್ನಲ್ಲಿ ನಡೆಯಬೇಕಿತ್ತು. ಆದರೆ ಅರ್ಜಿ ವಿಚಾರಣೆ ದಿನವೇ ಪತಿ ಆತ್ಮಹತ್ಯೆಗೆ ಶರಣಾಗಿದ್ದು, ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
ಹೆಂಡತಿ ಟಾರ್ಚರ್‌ನಿಂದ ನಾನು ಸಾಯುತ್ತಿದ್ದೇನೆ ಎಂದು ಡೆತ್ನೋಟ್ ಬರೆದಿಟ್ಟು ಪತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪಿಂಕಿ ಖಾಸಗಿ ಶಾಲೆ ಶಿಕ್ಷಕಿಯಾಗಿದ್ದಳು. ಇತ್ತೀಚಿಗೆ ಬೇರೆ ವ್ಯಕ್ತಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಇದನ್ನು ಪೀಟರ್ ಮತ್ತು ಕುಟುಂಬಸ್ಥರು ಪ್ರಶ್ನೆ ಮಾಡಿದ್ದರು. ಆದರೆ ಇದಕ್ಕೆ ಪಿಂಕಿ, ನನ್ನ ಜೀವನ ನನ್ನಿಷ್ಟ ಎಂದಿದ್ದಳು. ಅಲ್ಲದೆ ಇತ್ತೀಚೆಗೆ ಪಿಂಕಿ ಹಲವಾರು ತಿಂಗಳು ಗಂಡನಿಂದ ದೂರುವಾಗಿ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಳು. ಇಂದು ಕೋರ್ಟ್ ನಲ್ಲಿ ವಿಚಾರಣೆ ಇತ್ತು. ಆದರೆ ವಿಚ್ಚೇದನಕ್ಕೆ 20 ಲಕ್ಷ ರೂ. ಬೇಡಿಕೆ ಇಟ್ಟಿರುವ ಆರೋಪ ಪತ್ನಿ ವಿರುದ್ಧ ಕೇಳಿಬಂದಿದ್ದು, ಇದರಿಂದ ಪೀಟರ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.