ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್‍ನಲ್ಲಿ ಕುಳಿತು ದಂಪತಿ ರೊಮ್ಯಾನ್ಸ್: ಸಕತ್ ವೈರಲ್ ಆದ ವಿಡಿಯೋಗೆ ನೆಟ್ಟಿಗರು ಗರಂ!

Views: 379
ಕನ್ನಡ ಕರಾವಳಿ ಸುದ್ದಿ: ಚಲಿಸುತ್ತಿದ್ದ ಬೈಕ್‍ನಲ್ಲಿ ಕುಳಿತ ದಂಪತಿ ರೊಮ್ಯಾನ್ಸ್ ಮಾಡುತ್ತಾ ಅಪಾಯಕಾರಿ ಸ್ಟಂಟ್‍ಗಳನ್ನು ಮಾಡಿದ್ದ ವಿಡಿಯೊವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿದೆ. ಉತ್ತರಪ್ರದೇಶದ ಮೊರಾದಾಬಾದ್‍ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯು ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತು ಬೈಕ್ ರೈಡ್ ಮಾಡುತ್ತಿದ್ದ ತನ್ನ ಸಂಗಾತಿಯನ್ನು ತಬ್ಬಿಕೊಂಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ವೈರಲ್ ಆಗಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ದಂಪತಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಹೆದ್ದಾರಿಯಲ್ಲಿ ಅಪಾಯಕಾರಿ ಸ್ಟಂಟ್‍ಗಳಲ್ಲಿ ತೊಡಗುವ ಮೂಲಕ ತಮ್ಮ ಪ್ರಾಣವನ್ನು ಪಣಕ್ಕಿಟ್ಟಿದ್ದಾರೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ.
ವಿಡಿಯೊದಲ್ಲಿ ಮಹಿಳೆ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿದ್ದರೆ, ಬೈಕ್ ಸವಾರ ಹೆದ್ದಾರಿಯ ಮಧ್ಯದಲ್ಲಿ ಬೈಕ್ ಅನ್ನು ವೇಗವಾಗಿ ಓಡಿಸುತ್ತಿರುವುದು ಸೆರೆಯಾಗಿದೆ. ಈ ಬೈಕ್ UP21DB4885 ನಂಬರ್ ಅನ್ನು ಹೊಂದಿರುವ ಕಪ್ಪು ಬಜಾಜ್ ಪಲ್ಸರ್ ಎನ್ನಲಾಗಿದೆ. ಈ ಘಟನೆಯನ್ನು ಅದೇ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ನಂತರ ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ವೈರಲ್ ಆಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ಬಗ್ಗೆ ವರದಿಯಾಗಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೊವನ್ನು ಸಾವಿರಾರು ನೆಟ್ಟಿಗರು ವೀಕ್ಷಿಸಿದ್ದಾರೆ. ಅವರೆಲ್ಲರೂ ತಮ್ಮೊಂದಿಗೆ ಇತರ ಸವಾರರ ಜೀವಕ್ಕೆ ಅಪಾಯವನ್ನುಂಟು ಮಾಡಿದ ಬೈಕ್ ಸವಾರ ಮತ್ತು ಮಹಿಳೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಇನ್‌ಸ್ಟಾಗ್ರಾಂ ರೀಲ್‍ಗಾಗಿ ಈ ವಿಡಿಯೊವನ್ನು ಮಾಡಲಾಗಿದೆ ಮತ್ತು ದಂಪತಿ ಇಂತಹ ಅಪಾಯಕಾರಿ ಸ್ಟಂಟ್ ಮಾಡುವ ಮೂಲಕ ಜನಪ್ರಿಯತೆ ಪಡೆಯಲು ಪ್ರಯತ್ನಿಸಿದ್ದಾರೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ. ಮೊರಾದಾಬಾದ್-ದೆಹಲಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ