ಹೆಬ್ರಿ: ಬೊಲೆರೋ-ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

Views: 166
ಕನ್ನಡ ಕರಾವಳಿ ಸುದ್ದಿ: ಹೆಬ್ರಿ ಜಕ್ಕನಮಕ್ಕಿ ಬಳಿ ಹೆದ್ದಾರಿಯಲ್ಲಿ ಮಾ. 28ರಂದು ಮಾರುತಿ ಸ್ವಿಫ್ಟ್ ಹಾಗೂ ಬೊಲೆರೋ ವಾಹನ ಮುಖಾಮುಖಿ ಢಿಕ್ಕಿಯಾಗಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ವಿಫ್ಟ್ ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು ಬಸ್ತೆವ್ (53) ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾಗರದಿಂದ ಮಣಿಪಾಲ ಆಸ್ಪತ್ರೆಗೆ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು,ಬೊಲೆರೊ ವಾಹನ ಆಗುಂಬೆ ಕಡೆಗೆ ಹೋಗುತ್ತಿದ್ದ ವೇಳೆ ಜಕ್ಕನಮಕ್ಕಿ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೊಲೆರೋ ವಾಹನಗಳ ನಡುವಿನ ಡಿಕ್ಕಿಯಲ್ಲಿ ಕಾರಿನಲ್ಲಿ ಇದ್ದ ಓರ್ವ ಪ್ರಯಾಣಿಕರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಒಟ್ಟು ಐದು ಜನ ಪ್ರಯಾಣಿಸುತ್ತಿದ್ದರು. ಉಳಿದ ನಾಲ್ಕು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಬೊಲೆರೊ ವಾಹನದಲ್ಲಿ ರೈಲ್ವೇ ಪೊಲೀಸರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಎಲ್ಲಾ ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ್ ಟಿ ಎಂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ಸಾಖಲಾಗಿದೆ