ಶಿಕ್ಷಣ

ಹೆಮ್ಮಾಡಿಯ ಜನತಾ ಅನುದಾನಿತ ಪ್ರೌಢಶಾಲೆಗೆ ಬಸ್ ಕೊಡುಗೆ ನೀಡಿದ ಗಣೇಶ ಮೊಗವೀರ

Views: 38

ಕನ್ನಡ ಕರಾವಳಿ ಸುದ್ದಿ: ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶ್ರೀ ವಿ.ವಿ.ವಿ.ಮಂಡಳಿ(ರಿ) ಆಡಳಿತ ಮಂಡಳಿಗೆ ಒಳಪಟ್ಟಿರುವ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಹೆಮ್ಮೆಯ ಶಿಕ್ಷಣ ಸಂಸ್ಥೆ.ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಪಡೆದುಕೊಂಡು ಶಿಕ್ಷಣ ಪಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲಾ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ಶಾಲಾ ವಾಹನ ಸೌಲಭ್ಯವನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಶಾಲಾ ವಾಹನವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು,ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ‌ ಬೋಧಕ/ಬೋಧಕೇತರ ವೃಂದದವರು,ಶಾಲಾ ಹಳೆ ವಿದ್ಯಾರ್ಥಿ ಶ್ರೀಧರ್ ರಾವ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Back to top button