ಇತರೆ

ಹೆಮ್ಮಾಡಿ ಜನತಾ ಪ.ಪೂ.ಕಾಲೇಜು ಹಾಗೂ ಜನತಾ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ 

Views: 328

ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರರವರು ಅಧ್ಯಕ್ಷತೆ ವಹಿಸಿ ಕನ್ನಡದ ಮನಸ್ಸುಗಳೆಲ್ಲವೂ ಒಂದಾಗಿ ಕನ್ನಡದ ಹಿರಿಮೆಯನ್ನು ಜಗದಗಲ ಪಸರಿಸಬೇಕೆಂದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಉದಯ ನಾಯ್ಕರವರು ನಾಡು-ನುಡಿ-ಸಂಸ್ಕ್ರತಿಯ ಅನಾವರಣದ ಕುರಿತಾಗಿ ಮಾತನಾಡಿ ಶುಭ ಹಾರೈಸಿದರು.ಕಾಲೇಜು ಹಾಗೂ ಪ್ರೌಢಶಾಲೆಯ ಬೋಧಕ/ಬೋಧಕೇತರ ವ್ರಂದದವರು ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪ್ರೌಢಶಾಲಾ ಶಿಕ್ಷಕರಾದ ವಿಠಲ ನಾಯ್ಕರವರು ಸ್ವಾಗತಿಸಿದರು. ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಾದ ಜಗದೀಶ್ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿ, ಶಿಕ್ಷಕರಾದ ಮಹೇಂದ್ರರವರು ವಂದಿಸಿದರು.

 

Related Articles

Back to top button