ರಾಜಕೀಯ

ಹೈಕಮಾಂಡ್ ಜೊತೆ ಮಹತ್ವದ ಮಾತುಕತೆ ನಂತರ ಸುಮಲತಾ ಏನಂದ್ರು..?

Views: 99

ಮಂಡ್ಯ ಲೋಕಸಭಾ ಚುನಾವಣೆಯ ಚರ್ಚೆಯ ಹಿನ್ನೆಲೆಯಲ್ಲಿ ಸಂಸದೆ ಸುಮಲತಾಗೆ ಬಿಜೆಪಿ ಹೈಕಮಾಂಡ್  ದಿಡೀರ್ ಬುಲಾವ್ ನೀಡಿತ್ತು. ಕೂಡಲೇ ದೆಹಲಿಗೆ ಬರಬೇಕೆಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಸಂಸದೆ ಸುಮಲತಾ ಅವರು ದೆಹಲಿಗೆ ಬಂದಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಜೆ.ಪಿ ನಡ್ಡಾ ಅವರ ಜೊತೆ ಮಾತುಕತೆ ಮುಕ್ತಾಯವಾಗಿದೆ. ಮಂಡ್ಯದ ಬಗ್ಗೆ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಕ್ಷೇತ್ರದಿಂದಲೇ ಟಿಕೆಟ್​ ಕೊಡಲು ನಾನು ಕೇಳಿದ್ದೇನೆ. ಇಂದು ಸಂಜೆ ಸಭೆ ನಡೆಯಲಿದೆ. ಈ ಸಭೆಯ ನಂತರ ನಿರ್ಧಾರವಾಗಲಿದೆ. ಮೋದಿಯವರು ನನಗೆ ಭರವಸೆ ನೀಡಿದ್ದಾರೆ. ನಿಮ್ಮನ್ನ ಮತ್ತು ನಿಮ್ಮ ಕಾರ್ಯಕರ್ತರನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ ಎಂದು ಭರವಸೆ‌ ನೀಡಿದ್ದಾರೆ. ನನ್ನ ಮುಂದಿನ ನಿರ್ಧಾರವನ್ನ ಕ್ಷೇತ್ರಕ್ಕೆ ತೆರಳಿ ನಮ್ಮ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ. ನನ್ನ ಸಂಸತ್ ಅವಧಿ ಮುಕ್ತಾಯದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.

ಬಿಜೆಪಿಯಿಂದ ಸ್ಪರ್ಧೆ ಮಾಡಿದ್ರೆ ಮಂಡ್ಯದಲ್ಲಿ ಬಿಜೆಪಿ ಹೆಸರು ಉಳಿಯುತ್ತೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರ ಊಹಾಪೋಹ.ಕಳೆದ ಬಾರಿ ಪಕ್ಷೇತರರವಾಗಿ ನಿಲ್ಲಿ ಎಂದು ಅಭಿಮಾನಿಗಳು ಹೇಳಿದ್ರು. ಮುಂದೆ ಯಾವುದೇ ನಿರ್ಧಾರ ಮಾಡುವುದಿದ್ದರೆ ಅವರನ್ನೇ ಕೇಳುತ್ತೇನೆ. ಮಂಡ್ಯದಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆ ಮಾಡ್ತಿವಿ ಅನ್ನೋದು ಸಹಜ. ಇಂದು ಬಿಜೆಪಿ ಹೈಕಮಾಂಡ್ ಏನ್ ನಿರ್ಧಾರ ಮಾಡುತ್ತೆ ಅದನ್ನು ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ ಎಂದು ಸುಮಲತಾ ತಿಳಿಸಿದ್ದಾರೆ.

ನನ್ನನ್ನು ಸಂಧಾನ ಮಾಡುವ ಪ್ರಯತ್ನ ಇಂದು ಆಗಿಲ್ಲ. ನಾಳೆ ಮಂಡ್ಯಕ್ಕೆ ಹೋಗಿ ಬೆಂಬಲಿಗರೊಂದಿಗೆ ಮಾತನಾಡುತ್ತೇನೆ. ಕಾರ್ಯಕರ್ತರನ್ನು ಬಿಟ್ಟು ಕೊಟ್ಟು ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದಿದ್ದೇನೆ. ನಿಮ್ಮ ಬೆಂಬಲಿಗರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ. ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಅಮಿತ್ ಶಾ ಅವರ ಭೇಟಿ ಮಾಡ್ಲಿಕ್ಕೆ ಹೇಳಿದ್ದಾರೆ. ಏನೇ ಆಗಲಿ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಸುಮಲತಾ ಹೇಳಿದ್ದಾರೆ. .

Related Articles

Back to top button