ಜನಮನ

ಹೊಸ ವರ್ಷಕ್ಕೆ ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಏರಿಕೆ

Views: 75

ಕನ್ನಡ ಕರಾವಳಿ ಸುದ್ದಿ: ಹೊಸ ವರ್ಷಕ್ಕೆ ಸರ್ಕಾರ ಗ್ರಾಹಕರಿಗೆ ಹೊಸ ಶಾಕ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರದಲ್ಲಿ ಏರಿಕೆಯಾಗಲಿದೆ ಎಂದು ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭಿಮಾನಾಯ್ಕ್, ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರದಲ್ಲಿ ಏರಿಕೆಯಾಗಲಿದೆ. ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಿಸುವಂತೆ ಪ್ರಸ್ತಾವನೆ ಬಂದಿದೆ. ಮುಖ್ಯಮಂತ್ರಿಗಳು ಒಪ್ಪಿಗೆ ಕೊಟ್ಟ ಬಳಿಕ ಹಾಲಿನ ದರ ಏರಿಕೆಯಾಗಲಿದೆ ಎಂದರು.

ಇನ್ನು ಈಗಿರುವ ಹೆಚ್ಚುವರಿ ನಂದಿನಿ ಹಾಲಿನ ದರ ಕಡಿತ ಮಾಡಲು ನಿರ್ಧರಿಸಲಾಗಿದೆ. ಹೆಚ್ಚುವರಿ 50ML ನಂದಿನಿ ಹಾಲಿನ ದರ ಕಡಿತವಾಗಲಿದೆ ಎಂದು ತಿಳಿಸಿದರು.

 

Related Articles

Back to top button
error: Content is protected !!