ಇತರೆ
ಹೊಸ ವರ್ಷದ ಸಂಭ್ರಮಾಚರಣೆ: ಭೀಕರ ಅಪಘಾತ; 6 ಜನ ಸ್ಥಳದಲ್ಲೇ ಸಾವು

Views: 91
ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿ ಒಟ್ಟು 8 ಪ್ರಯಾಣಿಕರು ಇದ್ದರು, ಅವರೆಲ್ಲ ಅದಿತ್ಯಪುರ ನಿವಾಸಿಗಳು ಎಂದು ತಿಳಿದುಬಂದಿದೆ. ಮೃತ 6 ಮಂದಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ದಾಖಲಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದರು. ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.