ಇತರೆ

ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ :ಬಿಜೆಪಿ ಮುಖಂಡ ಸೇರಿ ಹತ್ತು ಮಂದಿ ಬಂಧನ

Views: 113

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ ಜಾಲ ನಡೆಸುತ್ತಿದ್ದ ಆರೋಪದಲ್ಲಿ ಬಿಜೆಪಿ ಮುಖಂಡ ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದರು.

ಈ ಘಟನೆಯು ರಾಜಕೀಯ ಬಣ್ಣ ಪಡೆದುಕೊಂಡಿದ್ದು, ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿರುವ ತನ್ನ ಮುಖಂಡನನ್ನು ರಕ್ಷಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್‌ ಆರೋಪಿಸಿದೆ. ಸಂದೇಶ್‌ಖಾಲಿ ಪ್ರಕರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಟಿಎಂಸಿ ನಡೆಸಿದ ಹುನ್ನಾರವಿದು ಎಂದು ಬಿಜೆಪಿ ತಿರುಗೇಟು ನೀಡಿದೆ.

ಹೌರಾದ ಸಂಕ್ರೇಲ್‌ ಪ್ರದೇಶದಲ್ಲಿರುವ ಹೋಟೆಲ್‌ ಮೇಲೆ ದಾಳಿ ನಡೆಸಿದ ಪೊಲೀಸರು ಸ್ಥಳೀಯ ಬಿಜೆಪಿ ಮುಖಂಡ ಸವ್ಯಸಾಚಿ ಘೋಷ್‌ ಮತ್ತು ಇತರ 10 ಮಂದಿಯನ್ನು ಬಂಧಿಸಿದ್ದಾರೆ. ಬಿಜೆಪಿ ಮುಖಂಡನ ಒಡೆತನದಲ್ಲಿರುವ ಹೋಟೆಲ್‌ನಲ್ಲಿದ್ದ ಹಲವು ಯುವತಿಯರು ಮತ್ತು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಬಂಧಿತರನ್ನು ಏಳು ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

Related Articles

Back to top button