ಜನಮನ

ಹೋಮ್ ವರ್ಕ್ ಮಾಡದಕ್ಕೆ ತಲೆಗೆ ಹೊಡೆದ ಶಿಕ್ಷಕಿ; ಕುಸಿದು ಬಿದ್ದು 5 ವರ್ಷದ ವಿದ್ಯಾರ್ಥಿ ಮೃತ್ಯು

Views: 0

ಹೈದರಾಬಾದ್: ಹೋಮ್‌ ವರ್ಕ್ ಮಾಡಲಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಹೊಡೆದ ಪರಿಣಾಮ ಕುಸಿದು ಬಿದ್ದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿರುವುದು ವರದಿಯಾಗಿದೆ.

ಹೈದರಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಎಂಬ ವಿದ್ಯಾರ್ಥಿಗೆ ಹೋಮ್‌ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕನೊಬ್ಬರು ಹೊಡೆದಿದ್ದಾರೆ. ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದಿದ್ದಾನೆ.

ಕೂಡಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಹೇಮಂತ್‌ ಸೋಮವಾರ(ಅ.2 ರಂದು) ಮೃತಪಟ್ಟಿದ್ದಾರೆ.

ಇತ್ತ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಾಲಕನ ಪೋಷಕರು ಮತ್ತು ಇತರ ಕುಟುಂಬ ಸದಸ್ಯರು ಶಾಲೆ ಮುಂದೆ ಶವದೊಂದಿಗೆ ಪ್ರತಿಭಟನೆ ನಡೆಸಿ, ಸೂಕ್ತ ತನಿಖೆಗೆ ಒತ್ತಾಯ ಮಾಡಿದ್ದಾರೆ.

Related Articles

Back to top button