ಶಿಕ್ಷಣ

ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ – ರಕ್ಷಕ- ಶಿಕ್ಷಕ ಸಭೆ

Views: 0

ಕುಂದಾಪುರ: ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಇಲ್ಲಿ ಶಾಲಾ ರಕ್ಷಕ ಶಿಕ್ಷಕ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರು ಹಾಗು ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳು ಆಗಿರುವ ಅತೀ ವಂದನೀಯ ಗುರು ಸ್ಟ್ಯಾನಿ ತಾವ್ರೊರವರು ವಹಿಸಿ ಪೋಷಕರಿಂದ ಮಾಹಿತಿಯನ್ನು ಕಲೆಹಾಕಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಸಮಾನ ಪಾತ್ರವನ್ನು ವಹಿಸಿಕೊಳ್ಳುತ್ತಾರೆ ಹಾಗೂ ಶಾಲಾ ಗುಣಮಟ್ಟದ ಶಿಕ್ಷಣದ ಬಗ್ಗೆ ಅಧ್ಯಕ್ಷೀಯ ನುಡಿಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಕುಂದಾಪುರ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿರುವ ಶ್ರೀಮತಿ ಸುನಿತಾ ಬಾಂಜ್ ರವರು ಮಕ್ಕಳಿಗೆ ಪ್ರಾರಂಭದಿAದಲೇ ಕಲಿಸಬೇಕು. ಮಕ್ಕಳಿಗೆ ಶಿಕ್ಷಕರು ಮತ್ತು ಕುಟುಂಬದಿAದ ಎನನ್ನು ಕಲಿಯುತ್ತಾರೊ ಅದನ್ನು ಪ್ರತಿನಿಧಿಸುತ್ತಾರೆ’ ಎಂದು ತಿಳಿಸುತ್ತಾ ಮಕ್ಕಳನ್ನು ಇತರರೊಂದಿಗೆ ಹೋಲಿಸಬಾರದು’ ಎಂದು ಪೋಷಕರಿಗೆ ತಿಳಿಸಿದರು.

ಮುಖ್ಯ ಶಿಕ್ಷಕಿ ತೆರೇಜ್ ಶಾಂತಿಯವರು ಶಾಲೆಯ ನೀತಿ ನಿಯಮಗಳ ಬಗ್ಗೆ ತಿಳಿಸಿದರು. ಶಾಲಾ ವರದಿಯನ್ನು ಸಹ ಶಿಕ್ಷಕಿ ರಮ್ಯಾ ಹಾಗೂ ಸಹ ಶಿಕ್ಷಕ ಓರನ್ ರವರು ವಾಚಿಸಿದರು. ಸಹ ಶಿಕ್ಷಕಿ ಪ್ರತಿಮಾ ಶೆಟ್ಟಿಯವರು ಮುಖ್ಯ ಅತಿಥಿಗಳ ಕಿರು ಪರಿಚಯವನ್ನು ನೀಡಿದರು. ಶ್ರೀಮತಿ ನಿಮಿಷಾರವರು ಅಯವ್ಯಯ ವಾಚಿಸಿದರು, ಸಹ ಶಿಕ್ಷಕಿ ನೀತಾ ಮೆಂಡೋನ್ಸಾ ಸ್ವಾಗತಿಸಿದರ, ಸಹ ಶಿಕ್ಷಕಿ ಪ್ರೀತಿ ಅಂದ್ರಾದೆ ವಂದಿಸಿದರು, ಸಹ ಶಿಕ್ಷಕಿ ರಮ್ಯಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button