ಶಿಕ್ಷಣ

ಹೋಲಿ ರೋಜರಿ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಇವರಿಂದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ 

Views: 0

ಕುಂದಾಪುರ: ಇಲ್ಲಿನ ಸಂತ ಜೋಸೆಫರ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಹೋಲಿ ರೋಜರಿ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಲಿ. ಕುಂದಾಪುರ ಇವರು ಉಚಿತ ಸಮವಸ್ತ್ರ ಕೊಡುಗೆಯಾಗಿ ನೀಡಿದರು

.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಜಂಟಿ ಕಾರ್ಯದರ್ಶಿಗಳಾದ ಸಿಸ್ಟರ್ ಸುಪ್ರಿಯ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. ಕುಂದಾಪುರ ರೋಜರಿ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಲಿ. ಇದರ ಅಧ್ಯಕ್ಷರಾಗಿರುವ ಜಾನ್ಸನ್ ಡಿ ಅಲ್ಮೇಡಾ ಇವರು ಸಮವಸ್ತ್ರವನ್ನು ವಿತರಿಸಿ ಸಮವಸ್ತ್ರದ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ರೋಜರಿ ಸೊಸೈಟಿಯ ನಿರ್ದೇಶಕಿ ಶಾಂತಿ ಆರ್. ಕರ್ವಾಲ್ಲೊ, ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೇಬಲ್ ಡಿ ಅಲ್ಮೇಡಾ, ಸಿಬ್ಬಂದಿಗಳಾದ ಜೀವನ್ ರಾಜ್ ಡಿಸೋಜ ಇವರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ.ವಿ ಶುಭ ಹಾರೈಸಿದರು. ಶಿಕ್ಷಕರಾದ ಮೈಕಲ್ ಪುಟಾರ್ಡೊ ಸ್ವಾಗತಿಸಿದರು. ಶಿಕ್ಷಕಿ ಶ್ರೀಲತಾ ವಂದಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Related Articles

Back to top button