ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಪತ್ನಿ ಮೃತದೇಹ ಪತ್ತೆ!
Views: 29
ಕನ್ನಡ ಕರಾವಳಿ ಸುದ್ದಿ: ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಶೀಲು ಬಲ್ಹಾರ ಅವರ 23 ವರ್ಷದ ಪತ್ನಿಯ ಮೃತದೇಹವು ಶುಕ್ರವಾರ ಮದ್ಯಾಹ್ನ ಹರಿಯಾಣದ ರೋಹ್ಟಕ್ ಜಿಲ್ಲೆಯ ತಮ್ಮ ನಿವಾಸದಲ್ಲಿ ಪತ್ತೆಯಾಗಿದೆ. ಸಾವಿಗೆ ಕಾರಣ ಏನು ಎನ್ನುವ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಸಿಕ್ಕಿಲ್ಲ
ಮೆಹಮ್‌ನ ಫರ್ಮಾನಾ ಗ್ರಾಮದವರಾದ ಮುಸ್ಕಾನ್, 2023ರ ಡಿಸೆಂಬರ್‌ನಲ್ಲಿ ಶೀಲು ಅವರನ್ನು ವಿವಾಹವಾಗಿದ್ದರು. ದಂಪತಿಗೆ ಒಂಬತ್ತು ತಿಂಗಳ ಗಂಡು ಮಗುವಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಮೃತ ಮುಸ್ಕಾನ್ ಅವರ ಕುಟುಂಬಸ್ಥರು ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಮನೆಯ ಹೊರಗೆ ಪ್ರತಿಭಟನೆ ನಡೆಸಿದರು. ವಿಧಿವಿಜ್ಞಾನ (ಫೊರೆನ್ಸಿಕ್) ತಂಡವು ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಮುಸ್ಕಾನ್ ಅವರ ಮೃತದೇಹವನ್ನು ರೋಹ್ಟಕ್‌ನ ಪಿಜಿಐಎಂಎಸ್‌ಗೆ ಸಾಗಿಸಲಾಗಿದೆ.
ಮುಸ್ಕಾನ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ ಹಿಂದಿನ ದಿನ ಪಂಜಾಮ್ನ ಹಾಡೊಂದನ್ನು ಇನ್ಸ್ಟಾಗ್ರಾಮ್ನಲ್ಲಿ ರೀಲ್ ಮಾಡಿ ಅಪ್ಲೋಡ್ ಮಾಡಿದ್ದರು. ಸಂತೋಷವಾಗಿರುವ ಮಧ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆ ಹಿನ್ನೆಲೆ ಶೀಲು ಬಲ್ಹಾರ ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.






