ರಾಜಕೀಯ

ಅಂಬರೀಶ್ ಸ್ಮಾರಕಕ್ಕೆ ಕೋಟ್ಯಾಂತರ ತೆರಿಗೆ ಹಣ ಹೋಯ್ತು, ಸುಮಲತಾ ವಿರುದ್ಧ ಚೇತನ್ ಆರೋಪ

Views: 98

ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತೆ ಸುಮಲತಾ ಅಂಬರೀಶ್ ವಿರುದ್ಧ ತಿರುಗಿಬಿದ್ದಿದ್ದಾರೆ. ಅಂಬರೀಶ್ ಸ್ಮಾರಕಕ್ಕೆ ಕೋಟ್ಯಂತರ ತೆರಿಗೆದಾರರ ಹಣವನ್ನು ಬಳಸಿದಿದ್ದಾರೆಂದು ಆರೋಪಿಸಿದ್ದಾರೆ.

ಇತ್ತೀಚೆಗೆ ಸುಮಲತಾ ಈ ಬಾರಿಯ ಲೋಕಸಭೆ ಚುನಾವಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದ್ದಾರೆ. ಬಿಜೆಪಿ ಪಕ್ಷದಿಂದ ಮಂಡ್ಯ ಲೋಕಸಭೆ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಸುಮಲತಾ ಚುನಾವಣೆಗೆ ಸ್ಪರ್ಧೆ ಮಾಡದೆ ಇರಲು ನಿರ್ಧರಿಸಿದ್ದಾರೆ. ಹಾಗೇ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿದ್ದು, ಶೀಘ್ರದಲ್ಲೇ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಮಂಡ್ಯದಲ್ಲಿ ತನ್ನ ಬೆಂಬಲಿಗರೊಂದಿಗೆ ಹೇಳಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಚೇತನ್ ಅಹಿಂಸಾ ತನ್ನ ಫೇಸ್‌ಬುಕ್ ಹಾಗೂ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುಮಲತಾ ವಿರುದ್ಧ ತಿರುಗಿಬಿದ್ದಿದ್ದಾರೆ. ಸುಮಲತಾ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಚೇತನ್ ಪೋಸ್ಟ್ ಮಾಡುತ್ತಿದ್ದಂತೆ ವೈರಲ್ ಆಗಿದ್ದು, ಆ ಬಗ್ಗೆ ಚರ್ಚೆಯಾಗುತ್ತಿದೆ. ಅಷ್ಟಕ್ಕೂ ಚೇತನ್ ಮಂಡ್ಯದ ಹಾಲಿ ಎಂಪಿ ಸುಮಲತಾ ವಿರುದ್ಧ ಮಾಡಿರೋ ಆರೋಪವೇನು?

ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕಕ್ಕಾಗಿ ಸುಮಲತಾ ತೆರಿಗೆದಾರರ ಹಣವನ್ನು ಬಳಸಿಕೊಂಡಿದ್ದಾರೆಂದು ಈ ಹಿಂದೆ ಆರೋಪ ಮಾಡಿದ್ದರು. ಈಗ ಲೋಕಸಭೆ ಚುನಾವಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಚೇತನ್ ಮತ್ತೆ ಅದೇ ಆರೋಪ ಮಾಡಿ, ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಆರೋಪಗಳು ಹೀಗಿವೆ.

1. ಕೋವಿಡ್ ಸಮಯದಲ್ಲಿ ಅಂಬರೀಶ್ ಸ್ಮಾರಕಕ್ಕಾಗಿ ಕೋಟ್ಯಂತರ ತೆರಿಗೆದಾರರ ಹಣವನ್ನು ತೆಗೆದುಕೊಂಡರು.

2. ಖಾಸಗಿ ಪಿಎಂ ಕೇರ್ಸ್‌ಗೆ ಮಂಡ್ಯದ ಎಂಪಿ ಲಾಡ್ಸ್ ನಿಧಿಯನ್ನು ನೀಡಿದ್ದರು.

ಈಗ, ಮಂಡ್ಯ ಎಂಪಿ ಟಿಕೆಟ್ ‘100%’ ಎಂದು ತಪ್ಪಾಗಿ ಖಾತರಿಪಡಿಸಿಕೊಂಡ ನಂತರ ಅವರು ನಾನ್-ಫ್ಯಾಕ್ಟರ್ ಆಗಿದ್ದಾರೆ.

5 ವರ್ಷಗಳಲ್ಲಿ, ಸುಮಲತಾ ಅವರು ಅತ್ಯಲ್ಪ, ಪ್ಲೇಸ್‌ ಹೋಲ್ಡರ್ ಸಂಸದರಾಗಿದ್ದರು.” ಎಂದು ಚೇತನ್ ಟೀಕೆ ಮಾಡಿದ್ದಾರೆ.

ಅಂಬರೀಶ್ ಸ್ಮಾರಕಕ್ಕೆ ಸುಮಲತಾ ಅವರು ಅಂದಾಜು ಎರಡು ಎಕರೆ ಜಾಗ ಮತ್ತು 12 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ಕೈ ಚಾಚಿ ಪಡೆದಿರುವುದು ವಿಪರ್ಯಾಸ. ತೆರಿಗೆದಾರರ ಹಣವನ್ನು ದುರಪಯೋಗ ಪಡಿಸಿಕೊಳ್ಳುವ ಬದಲು ತಮ್ಮ ಸ್ವಂತ 23.4 ಕೋಟಿ ರೂ.ಗಳನ್ನು ಖರ್ಚು ಮಾಡಲು ಸಾಧ್ಯವಾಗಲಿಲ್ಲವೇ?” ಎಂದಿದ್ದರು. ಈಗ ಮತ್ತೆ “ಅಂಬರೀಶ್ ಸ್ಮಾರಕಕ್ಕಾಗಿ ಕೋಟ್ಯಂತರ ತೆರಿಗೆದಾರರ ಹಣವನ್ನು ತೆಗೆದುಕೊಂಡರು.” ಎಂದು ಆರೋಪಿಸಿದ್ದಾರೆ.

 

 

Related Articles

Back to top button
error: Content is protected !!